ಹೊತ್ತಿತೋ ಹೊತ್ತಿತು ಕನ್ನಡದ ದೀಪ | Hottito Hottitu Kannada Deepa lyrics in Kannada
ಹೊತ್ತಿತೋ ಹೊತ್ತಿತು ಕನ್ನಡದ ದೀಪ Hottito Hottitu Kannada Deepa lyrics in Kannada
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಈ ಲೇಖನಿಯಲ್ಲಿ ಹೊತ್ತಿತ್ತೋ ಹೊತ್ತಿತು ಕನ್ನಡದ ದೀಪ ಸಾಂಗ್ ಲಿರಿಕ್ಸ್ ನಿಮಗೆ ಅನುಕೂಲವಾಗುವಂತೆ ನಮ್ಮ post ನಲ್ಲಿ ತಿಳಿಸಲಾಗಿದೆ.
Hottito Hottitu Kannada Deepa Lyrics in Kannada
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಮುಗಿಯಿತೋ ಮುಗಿಯಿತು ಶತಮಾನಗಳ ಶಾಪ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಹೊತ್ತಿತೋ.. ಹೊತ್ತಿತು…ಕನ್ನಡದ ದೀಪ
ಕಣ್ಣು ಕುಕ್ಕಿಸುವಂತೆ ದೇದೀಪ್ಯಮಾನ
ಹರ್ಷ ಉಕ್ಕಿಸುವಂತೆ ಶೋಭಾಯಮಾನ..
ಕನ್ನಡದ ಮನೆಯಾಗೇ ಜ್ಯೋತಿರ್ನಿಧಾನ
ಕನ್ನಡದ ಪ್ರಾಣ.. ಕನ್ನಡದ ಮಾನ ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಉರಿವವರು ಬೇಕಿನ್ನು ಇದರೆಣ್ಣೆಯಾಗಿ
ಸುಡುವವರು ಬೇಕಿನ್ನು ನಿಡುಬತ್ತಿಯಾಗಿ..
ಧರಿಸುವವರು ಬೇಕಿನ್ನು ಸಿರಿಹಣತೆಯಾಗಿ
ನಮ್ಮೀ ಉಸಿರಾಗಿ ಧರ್ಮಕ್ಕೆ ಬಾಗಿ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಚಿರಕಾಲ ಬೆಳಗಲಿ ಕನ್ನಡದ ದೀಪ
ಜನಕೆಲ್ಲ ಬೆಳಕಾಗಿ ಪುಣ್ಯ ಪ್ರದೀಪ..
ಭಾರತಕೆ ಬಲವಾಗಿ ಭವ್ಯ ಪ್ರದೀಪ
ಕಳೆಯುತ್ತ ತಾಪ , ಬೆಳೆಸುತ್ತ ಸೈಪ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಮುಗಿಯಿತೋ ಮುಗಿಯಿತು ಶತಮಾನಗಳ ಶಾಪ
ಹೊತ್ತಿತೋ.. ಹೊತ್ತಿತು.. ಕನ್ನಡದ ದೀಪ.
ಇತರೆ ವಿಷಯಗಳು :